ಮಂಡ್ಯ:ಜಿಲ್ಲೆಯ ಎರಡು ಕಡೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಚಾಲನೆ ನೀಡಲಾಗಿದೆ.ಶಾಸಕರಾದ ರವೀಂದ್ರ ಶ್ರೀಕಂಠಯ್ಯ ಹಾಗೂ ಕೆ ಸಿ ನಾರಾಯಣಗೌಡ ಹೊಸ ಸರ್ಕಾರಿ ಪಬ್ಲಿಕ್ ಶಾಲೆಗಳನ್ನ ಉದ್ಘಾಟಿಸಿದ್ದಾರೆ.
ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷಿ ಸರ್ಕಾರಿ ಪಬ್ಲಿಕ್ ಶಾಲೆಗಳಿಗೆ ಮಂಡ್ಯ ಜಿಲ್ಲೆಯಲ್ಲಿ ಚಾಲನೆ.. - undefined
ಅರಕೆರೆ ಹಾಗೂ ಕೆಆರ್‌ಪೇಟೆಯಲ್ಲಿ ಉದ್ಘಾಟನೆಗೊಂಡ ಕರ್ನಾಟಕ ಪಬ್ಲಿಕ್ ಶಾಲೆಗಳು

ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಶಾಲೆಯ ಉದ್ಘಾಟನೆಯನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ನೆರವೇರಿಸಿ, ಜನತೆ ತಮ್ಮ ಮಕ್ಕಳನ್ನು ಈ ಶಾಲೆಗಳಿಗೆ ಸೇರಿಸುವ ಮೂಲಕ ಉಪಯೋಗ ಪಡೆಯುವಂತೆ ಮನವಿ ಮಾಡಿದರು.ಕೆಆರ್‌ಪೇಟೆ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಗೆ ಶಾಸಕ ಕೆ ಸಿ ನಾರಾಯಣಗೌಡ ಚಾಲನೆ ಕೊಟ್ಟರು. ಒಂದೇ ಶಾಲಾ ಆವರಣದಲ್ಲೇ ಎಲ್ಕೆಜಿ ಇಂದ ಪಿಯುಸಿವರೆಗಿನ ಶಿಕ್ಷಣವನ್ನು ನೀಡುವ ಹಾಗೇ ಸರ್ಕಾರದಿಂದ ಅನುಷ್ಠಾನ ಮಾಡಿಸುವ ಕಾರ್ಯವನ್ನು ಮಾಡುತ್ತೇವೆಂದು ಇದೇ ವೇಳೆ ಶಾಸಕ ನಾರಾಯಣಗೌಡ ಭರವಸೆ ನೀಡಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಬ್ಲಿಕ್ ಶಾಲೆಗಳನ್ನು ಜಿಲ್ಲೆಯಲ್ಲಿ ಪ್ರಾರಂಭಗೊಂಡಿರುವ ಬಗ್ಗೆ ಸಾರ್ವಜನಿಕರು ಖುಷಿಯಾಗಿದ್ದು, ಶಾಲೆಯ ಶಿಕ್ಷಣದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.