ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವುಗಳು ಸಂಭವಿಸುತ್ತಿರುವ ಹಿನ್ನೆಲೆ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.
ಲಾಕ್ಡೌನ್ ಅವಧಿ ವಿಸ್ತರಣೆಯಾಗಬಹುದು: ಸಚಿವ ಕೆ.ಸಿ. ನಾರಾಯಣಗೌಡ - ಲಾಕ್ಡೌನ್ ಅವಧಿ ಹೆಚ್ಚಳ
ಕೊರೊನಾ ಸೋಂಕು ನಿಯಂತ್ರಿಸುವ ಹಿನ್ನೆಲೆ ಸಿಎಂ ಬಿ.ಎಸ್. ಯಡಿಯೂರಪ್ಪನವರು ಒಂದು ವಾರ ಲಾಕ್ಡೌನ್ ಮಾಡಿದ್ದಾರೆ. ಅದನ್ನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿಸುವ ಸಂದರ್ಭ ಬಂದರೂ ಬರಬಹುದು ಎಂದು ಪೌರಾಡಳಿತ ಸಚಿವ ಕೆ. ಸಿ. ನಾರಾಯಣಗೌಡ ತಿಳಿಸಿದರು.
ಸಚಿವ ಕೆ ಸಿ ನಾರಾಯಣಗೌಡ
ಕೊರೊನಾ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ತೆಗೆದುಕೊಂಡಿರುವ ಅಗತ್ಯ ಮುಂಜಾಗ್ರತಾ ಕ್ರಮ, ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ಮಾಡಿದರು. ಸಭೆಯಲ್ಲಿ ಆರೋಗ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ನಾರಾಯಣಗೌಡ, ಮುಂಬೈ ಮದ್ರಾಸ್ನಿಂದ ಜನ ಬಂದಿರುವವರಿಂದ ಬೆಂಗಳೂರಿಗೆ ಕೊರೊನಾ ಸೋಂಕು ಹರಡಿದೆ. ಸೋಂಕು ನಿಯಂತ್ರಣಕ್ಕೆ ಸಿಎಂ ಒಂದು ವಾರ ಲಾಕ್ ಡೌನ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದು, ಇನ್ನೂ ಹೆಚ್ಚಿಸುವ ಸಂದರ್ಭ ಬರಬಹುದು ಎಂದು ತಿಳಿಸಿದರು.