ಮಂಡ್ಯ:ಉಪ ಚುನಾವಣೆ ಜೆಡಿಎಸ್‌ಗೆ ಪ್ರತಿಷ್ಠೆಯ ವಿಷಯವಾಗಿದೆ. ಅದರಲ್ಲೂ ಕೆ.ಆರ್.ಪೇಟೆ ಕ್ಷೇತ್ರವನ್ನು ಮರಳಿ ಪಡೆಯಲು ಪಕ್ಷ ಸಂಘಟನೆಗೆ ಮುಂದಾಗಿದೆ. ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಎಲ್ಲರೂ ಚುನಾವಣೆಯ ಹುಮ್ಮಸ್ಸಿನಲ್ಲಿದ್ದಾರೆ.
ಕೆ.ಆರ್.ಪೇಟೆ ಉಪ ಚುನಾವಣೆ: ಜೆಡಿಎಸ್ ಭರ್ಜರಿ ತಯಾರಿ - ಕೆ.ಆರ್. ಪೇಟೆ ಕ್ಷೇತ್ರವನ್ನು ಮರಳಿ ಪಡೆಯಲು ಜೆಡಿಎಸ್ ಪಕ್ಷ ಸಂಘಟನೆ
ರಾಜ್ಯದಲ್ಲಿ ಉಪ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಮಂಡ್ಯದ ಕೆ.ಆರ್.ಪೇಟೆ ಕ್ಷೇತ್ರವನ್ನು ಗೆಲ್ಲಲು ಜೆಡಿಎಸ್ ಪಣ ತೊಟ್ಟಿದೆ.
ಕೆ.ಆರ್.ಪೇಟೆ ಉಪಚುನಾವಣೆ
ಇಂದು ಪದಾಧಿಕಾರಿಗಳು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಚುನಾವಣಾ ತಯಾರಿ ಬಗ್ಗೆ ಚರ್ಚೆ ಮಾಡಲಾಯಿತು. ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಯಾರೇ ಆಯ್ಕೆಯಾದರೂ ಒಗ್ಗಟ್ಟಿನಿಂದ ಹೋರಾಟ ಮಾಡಲು ನಿರ್ಧಾರ ಮಾಡಲಾಯಿತು.
ತಾಲೂಕು ಜೆಡಿಎಸ್ ಅಧ್ಯಕ್ಷರ ನಿಧನ ಹಿನ್ನೆಲೆ ನೂತನ ಅಧ್ಯಕ್ಷರಾಗಿ ಜಾನಕಿ ರಾಮು ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಾಧ್ಯಕ್ಷ ರಾಮಚಂದ್ರು ಸೇರಿದಂತೆ ಎಲ್ಲಾ ಪದಾಧಿಕಾರಿಗಳನ್ನು ಪಕ್ಷ ನೂತನವಾಗಿ ಆಯ್ಕೆ ಮಾಡಿದೆ.