ಮಂಡ್ಯ: ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ರೈತರು ಆತಂಕ ಪಡಬೇಕಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರ ವಿಜಯಕುಮಾರ್ ತಿಳಿಸಿದ್ದಾರೆ.
ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿಲ್ಲ: ಕಾವೇರಿ ನೀರಾವರಿ ಅಧೀಕ್ಷಕ ಅಭಿಯಂತರ ಸ್ಪಷ್ಟನೆ - ಅಧೀಕ್ಷಕ ಅಭಿಯಂತರ ವಿಜಯಕುಮಾರ್ ಪ್ರತಿಕ್ರಿಯೆ
ಕೆಆರ್ಎಸ್ ಅಣೆಕಟ್ಟು ಬಿರುಕು ಬಿಟ್ಟಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರ ವಿಜಯಕುಮಾರ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಅಧೀಕ್ಷಕ ಅಭಿಯಂತರ ವಿಜಯಕುಮಾರ್ ಹೇಳಿಕೆ
ಡ್ಯಾಂ ಸುರಕ್ಷಿತವಾಗಿದೆ. ವಿವಾದ ಶುರುವಾದ ಬಳಿಕ ಪರಿಶೀಲನೆ ಮಾಡಿ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಜೊತೆಗೆ ವರದಿ ನೀಡಲಾಗಿದೆ. ಸಂಸದೆ ಸುಮಲತಾ ಅಂಬರೀಷ್ ಅವರಿಗೂ ಮಾಹಿತಿ ನೀಡಲಾಗಿದೆ ಎಂದರು.
ಅಣೆಕಟ್ಟೆಯ ಅಧಿಕಾರಿಗಳು ಪ್ರತಿದಿನ ಪರಿಶೀಲನೆ ಮಾಡುತ್ತಾರೆ. ಡ್ಯಾಂನ ಎಲ್ಲಾ ಗೇಟ್ಗಳನ್ನು ಬದಲಾವಣೆ ಮಾಡಲಾಗಿದೆ. ಕಲ್ಲುಗಳು ಹೊರಗೆ ಬರುತ್ತವೆ, ಅವುಗಳನ್ನು ಗೇಟ್ ಅಳವಡಿಸಿದ ಬಳಿಕ ಸರಿ ಮಾಡಲಾಗುತ್ತದೆ ಎಂದು ವಿವರಿಸಿದರು.