ಚುರುಕು ಪಡೆದ ಮುಂಗಾರು: ಕೆಆರ್ಎಸ್ನಲ್ಲಿ 104.38 ಅಡಿ ನೀರು ಸಂಗ್ರಹ - ಕೃಷ್ಣರಾಜ ಸಾಗರ ಜಲಾಶಯ
ರಾಜ್ಯದಲ್ಲಿ ಮಳೆಯಾರ್ಭಟ ಜೋರಾಗಿದ್ದು, ಹಲವು ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿದೆ.
ಕೆಆರ್ಎಸ್ನಲ್ಲಿ 104.38 ಅಡಿ ನೀರು ಸಂಗ್ರಹ
By
Published : Jul 24, 2021, 7:33 AM IST
ಮಂಡ್ಯ: ರಾಜ್ಯದಲ್ಲಿ ಮುಂಗಾರು ಚುರುಕಾಗಿರುವುದರಿಂದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕೆಆರ್‌ಎಸ್ ಜಲಾಶಯದಲ್ಲಿ 104.38 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನ ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಕೃಷ್ಣರಾಜ ಸಾಗರ ಜಲಾಶಯಕ್ಕೆ 25,915 ಕ್ಯೂಸೆಕ್ ಒಳಹರಿವಿದೆ.
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ 104.38 ಅಡಿ ನೀರು ಸಂಗ್ರಹವಾಗಿದೆ. ಅಣೆಕಟ್ಟೆಗೆ 25,915 ಕ್ಯೂಸೆಕ್ ಒಳಹರಿವಿದ್ದು, ಜಲಾಶಯದಿಂದ 6,415 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.
ಕಳೆದ ಒಂದು ವಾರದ ಹಿಂದೆ 22 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತಿತ್ತು. ಆದರೆ, ಕೊಡಗು, ಭಾಗಮಂಡಲ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕೆಲದಿನಗಳಲ್ಲೇ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.