ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ರೈತರಿಗೆ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದು, ಕೆ.ಆರ್.ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮ ಹಾಗೂ ಸುತ್ತಲಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಮಂಡ್ಯದಲ್ಲಿ ಭಯ ಹುಟ್ಟಿಸಿದ್ದ ಚಿರತೆ ಬೋನಿಗೆ: ನಿಟ್ಟುಸಿರು ಬಿಟ್ಟ ಸ್ಥಳೀಯರು
ಮಂಡ್ಯ ಜಿಲ್ಲೆಯಲ್ಲಿ ಒಂದು ವಾರದಿಂದ ರೈತರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಮಂಡ್ಯದಲ್ಲಿ ಭಯ ಹುಟ್ಟಿಸಿದ್ದ ಚಿರತೆ ಬೋನಿಗೆ
ಒಂದು ವಾರದಿಂದ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಚಿರತೆ ಸೇರಿಕೊಂಡಿತ್ತು. ಚಿರತೆ ಭಯದಿಂದ ರೈತರು ಆತಂಕಗೊಂಡಿದ್ದರು. ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿದಿದ್ದಾರೆ.
ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯಕ್ಕೆ ಬಿಡಲು ನಿರ್ಧರಿಸಲಾಗಿದ್ದು, ಅಧಿಕಾರಿಗಳ ಕಾರ್ಯಾಚರಣೆಗೆ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.