ಮಂಡ್ಯ: ಸಿಎಂ ಯಡಿಯೂರಪ್ಪರ ನಿರ್ಧಾರಕ್ಕೆ ಜಿಲ್ಲಾ ಬಿಜೆಪಿಯಲ್ಲಿ ಅಸಮಧಾನದ ಹೊಗೆ ಎದ್ದಿದೆ. ಮನ್ಮುಲ್ನ ನಾಮನಿರ್ದೇಶಕ ಸ್ಥಾನಕ್ಕೆ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರು ರಾಜ್ಯಾಧ್ಯಕ್ಷರಿಗೆ ಪತ್ರದ ಮುಖೇನ ಮನವಿ ಮಾಡಿದ್ದಾರೆ.
ಮನ್ ಮುಲ್ನಲ್ಲಿ ಭುಗಿಲೆದ್ದ ಅಸಮಾಧಾನ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದ ಮಂಡ್ಯ ಜಿಲ್ಲಾಧ್ಯಕ್ಷ - ಮನ್ ಮುಲ್
ಎಸ್.ಎಂ. ಕೃಷ್ಣ ಬೆಂಬಲಿಗ ಪ್ರಸನ್ನ ಕುಮಾರ್ ಹೆಸರನ್ನು ಸಿಎಂ ಯಡಿಯೂರಪ್ಪ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶದಿಂದ ಈಗ ಮನ್ಮುಲ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಮನ್ ಮುಲ್ನಲ್ಲಿ ಬುಗಿಲೆದ್ದ ಅಸಮಧಾನ
ಮನ್ ಮುಲ್ ಆಡಳಿತ ಮಂಡಳಿಗೆ ಇತ್ತೀಚೆಗೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಎಸ್.ಎಂ. ಕೃಷ್ಣ ಅವರ ಬೆಂಬಲಿಗ ಪ್ರಸನ್ನ ಕುಮಾರ್ ಹೆಸರನ್ನು ಸಿಎಂ ಯಡಿಯೂರಪ್ಪ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶಕ್ಕೆ ಈಗ ಅಸಮಾಧಾನ ಭುಗಿಲೆದ್ದಿದೆ.
ಸಿಎಂ ಆದೇಶದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ಗೆ ಪತ್ರ ಬರೆದಿರುವ ಜಿಲ್ಲಾಧ್ಯಕ್ಷ ನಾಗಣ್ಣಗೌಡ, ಪಕ್ಷದ ಕಾರ್ಯಕರ್ತರಿಗೆ ಮಣೆ ಹಾಕುವಂತೆ ಮನವಿ ಮಾಡಿದ್ದಾರೆ. ಆ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ಮನವಿ ಮಾಡಿದ್ದಾರೆ.