ಮಂಡ್ಯ: ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ಸಾವಿಗೀಡಾದ ಘಟನೆ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ಸಾವು - transformer repair
ಟ್ರಾನ್ಸ್ಫಾರ್ಮರ್ ದುರಸ್ತಿ ಮಾಡುತ್ತಿರುವಾಗ ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ಸಾವನ್ನಪ್ಪಿದ ಘಟನೆ ಮಂಡ್ಯ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಲೈನ್ ಮನ್ ಸಾವು
ಲೊಕೇಶ್ (40) ಮೃತಪಟ್ಟಿರುವ ಲೈನ್ಮ್ಯಾನ್. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಿರಿಯ ಅಧಿಕಾರಿಗಳ ಲೋಪದಿಂದ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ.
ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.