ಮಂಡ್ಯ:ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಪಕ್ಕದಲ್ಲಿದ್ದ ಕೋಳಿ ಅಂಗಡಿಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಡ್ಯದಲ್ಲಿ ನಿಯಂತ್ರಣ ತಪ್ಪಿ ಕೋಳಿ ಅಂಗಡಿಗೆ ಗುದ್ದಿದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು - ಅಪಘಾತದಲ್ಲಿ ಇಬ್ಬರು ಸಾವು
ಮಂಡ್ಯದಲ್ಲಿ ಕೋಳಿ ಅಂಗಡಿಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಗುದ್ದಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಅಂಗಡಿ ಮುಂದೆ ಕುಳಿತಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.
ನಿಯಂತ್ರಣ ತಪ್ಪಿ ಕೋಳಿ ಅಂಗಡಿಗೆ ಗುದ್ದಿದ ಲಾರಿ
ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ಅಂಗಡಿ ಮುಂದೆ ಕುಳಿತಿದ್ದ ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ(50) ಹಾಗೂ ಎಚ್. ಕೋಡಿಹಳ್ಳಿ ಗ್ರಾಮದ ಲೋಕೇಶ್ (44) ಎಂಬಿಬ್ಬರು ಮೃತಪಟ್ಟಿದ್ದಾರೆ.
ಅಂಗಡಿ ಮಾಲೀಕ ನಿಂಗೇಗೌಡ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಸಗರಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.