ಮಂಡ್ಯ:ಅಪ್ರಾಪ್ತ ವಯಸ್ಸಿನ ಪ್ರೇಮಿಗಳ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ತಾಲೂಕಿನ ಕೆರೊಗೊಡು ಹೋಬಳಿಯ ಹಂಪಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಧನಲಕ್ಷ್ಮಿ (15) ಹಾಗೂ ನವೀನ್ (19) ಮೃತ ದುರ್ದೈವಿಗಳು. ಒಂದೇ ಗ್ರಾಮದವರಾದ ಈ ಜೋಡಿ ಹಕ್ಕಿಗಳು ಕಳೆದ ಒಂದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಹುಡುಗಿ ದಲಿತ ಸಮುದಾಯಕ್ಕೆ ಸೇರಿದವಳಾಗಿದ್ದು, ಹುಡುಗ ಮೇಲ್ವರ್ಗದ ಕುಟುಂಬಕ್ಕೆ ಸೇರಿದ್ದ ಎಂದು ಹೇಳಲಾಗ್ತಿದೆ. ಹೀಗಾಗಿ ಮನೆಯಲ್ಲಿ ಪ್ರೀತಿಗೆ ಒಪ್ಪುವುದಿಲ್ಲ ಎಂಬ ಕಾರಣಕ್ಕೆ ಈ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ.