ಮಂಡ್ಯ: ಜಿಲ್ಲೆಯ ಖ್ಯಾತ ಐದು ರೂಪಾಯಿ ಡಾಕ್ಟರ್ ಎಂದೇ ಪ್ರಸಿದ್ಧಿ ಪಡೆದಿರುವ ಡಾ. ಶಂಕರೇಗೌಡ ಅವರಿಗೆ ಸೋಮವಾರ ರಾತ್ರಿ ಲಘು ಹೃದಯಾಘಾತ ಸಂಭವಿಸಿದೆ. ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹೃದಯದ ಮೂರು ರಕ್ತನಾಳಗಳಲ್ಲಿ ಬ್ಲಾಕ್ ಆಗಿದೆ. ಶಂಕರೇಗೌಡರ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲವೆಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆಗಳಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.