ಮಂಡ್ಯ :ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಹಿನ್ನೆಲೆ ಮಂಡ್ಯದಲ್ಲಿ ರೈತ, ದಲಿತ, ಕಾರ್ಮಿಕ ಸಂಘಟನೆಗಳಿಂದ ಉಪವಾಸ ಸತ್ಯಾಗ್ರಹ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ನಡೆಸಿದ ರೈತ, ದಲಿತ, ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು, ರೈತ-ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿದರು.
ಗಾಂಧೀಜಿ ಹುತಾತ್ಮ ದಿನ ಪ್ರಯುಕ್ತ ರೈತ, ದಲಿತ, ಕಾರ್ಮಿಕ ಸಂಘಟನೆಗಳಿಂದ ಉಪವಾಸ ಸತ್ಯಾಗ್ರಹ
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜನ ವಿರೋಧಿ ಕಾಯ್ದೆಗಳನ್ನ ತಕ್ಷಣವೇ ರದ್ದು ಪಡಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರೈತ, ದಲಿತ, ಕಾರ್ಮಿಕ ಸಂಘಟನೆ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು..
ಉಪವಾಸ ಸತ್ಯಾಗ್ರಹ
ಇದೇ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜನ ವಿರೋಧಿ ಕಾಯ್ದೆಗಳನ್ನ ತಕ್ಷಣವೇ ರದ್ದು ಪಡಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರೈತ, ದಲಿತ, ಕಾರ್ಮಿಕ ಸಂಘಟನೆ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.