ಮಂಡ್ಯ: ಪ್ರೀತಿಸಿದ ಯುವತಿ ಜೊತೆ ಮದುವೆಗೆ ಪೋಷಕರು ಒಪ್ಪಿಗೆ ಸೂಚಿಸದ ಹಿನ್ನೆಲೆ ನಿದ್ದೆ ಮಾತ್ರೆ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಭಾಸ್ಕರ್(23)ಆತ್ಮಹತ್ಯೆಗೆ ಶರಣಾದ ಯುವಕ. ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದು ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಯುವಕ ಮನೆಯಲ್ಲಿ ನಿದ್ದೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.