ಮಂಡ್ಯ:ಇತ್ತೀಚೆಗಷ್ಟೇ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ನಗರ ಪ್ರದಕ್ಷಿಣೆ ಮಾಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಂದಿರಾ ಕ್ಯಾಂಟಿನ್ನಲ್ಲಿ ಊಟ ಸವಿಯುವ ಮೂಲಕ ಆಹಾರದ ಗುಣಮಟ್ಟ ಪರಿಶೀಲನೆ ಮಾಡಿದ್ದಾರೆ.
ನಗರ ಪ್ರದಕ್ಷಿಣೆ, ಇಂದಿರಾ ಕ್ಯಾಂಟೀನ್ನಲ್ಲಿ ಊಟ: ಮಂಡ್ಯ ಡಿಸಿ ಸರಳತೆಗೆ ಜನರ ಮೆಚ್ಚುಗೆ - ಮಂಡ್ಯ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಸುದ್ದಿ
ಮಂಡ್ಯದ ಇಂದಿರಾ ಕ್ಯಾಂಟೀನ್ಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ವೆಂಕಟೇಶ್, ಅಲ್ಲಿಯೇ ಊಟ ಮಾಡಿ ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿದರು. ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿ, ನಗರದ ಇಂದಿರಾ ಕ್ಯಾಂಟೀನ್ನಲ್ಲಿ ಊಟ ಸವಿದಿದ್ದು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಡಿಸಿ ಸರಳತೆಗೆ ಜನರ ಮೆಚ್ಚುಗೆ
ರಾಜ್ಯ ಸರ್ಕಾರ ನಗರದ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಹೀಗಾಗಿ ಅವಶ್ಯ ಕಾಮಗಾರಿಗಳ ಪಟ್ಟಿ ಮಾಡಲು ಮಂಡ್ಯದಲ್ಲಿ ರೌಂಡ್ಸ್ ಮಾಡಿದರು. ರಾತ್ರಿಯಾದ ಹಿನ್ನೆಲೆಯಲ್ಲಿ ದಿಢೀರ್ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದರು. ಅಲ್ಲಿಯೇ ಊಟ ಮಾಡಿ ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿದರು.
ಜಿಲ್ಲಾಧಿಕಾರಿಗಳು ಊಟ ಮಾಡಿದ ಹಿನ್ನೆಲೆಯಲ್ಲಿ ನಗರಸಭೆ ಆಯುಕ್ತ ಹಾಗೂ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಕೂಡಾ ಊಟ ಸವಿದರು. ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿ ನಗರದ ಇಂದಿರಾ ಕ್ಯಾಂಟೀನ್ನಲ್ಲಿ ಊಟ ಸವಿದಿದ್ದು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.