ಮಂಡ್ಯ:ಹೆದ್ದಾರಿ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಗಮಂಗಲ ತಾಲುಕಿನ ಹೂಣಕೆರೆ ಗ್ರಾಮದ ಬಳಿಯ ಶ್ರೀರಂಗಪಟ್ಟಣ-ನಾಗಮಂಗಲ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಬೈಕ್‌ನಲ್ಲಿದ್ದ ಆನಂದ್ ಕುಮಾರ್, ಅಮ್ಮು ಹಾಗೂ ನಾಲ್ಕು ತಿಂಗಳ ಗಂಡು ಮಗು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.