ಮಂಡ್ಯ: 15ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನ ಸೀಸನ್ ಇಂದು ಅಂತ್ಯಗೊಳ್ಳಲಿದೆ. ಗುಜರಾತ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ಪ್ರಶಸ್ತಿಗೋಸ್ಕರ ಕಾದಾಟ ನಡೆಸಲಿವೆ.
ಈ ಮಹತ್ವದ ಪಂದ್ಯಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದ್ದು, ಈಗಾಗಲೇ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಭಾನುವಾರ ರಾತ್ರಿ 8 ಗಂಟೆಗೆ ಪಂದ್ಯ ಆರಂಭಗೊಳ್ಳಲಿದ್ದು, ಅದಕ್ಕೂ ಮುಂಚಿತವಾಗಿ ಕೆಲ ನಿಮಿಷಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಈ ಕಾರ್ಯಕ್ರಮಕ್ಕೆ ಮಂಡ್ಯದ ಕಲಾವಿದರು ಮೆರುಗು ನೀಡಲಿದ್ದಾರೆ.