ಮಂಡ್ಯ:ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಸಂಸದೆ ಸುಮಲತಾ ಇಂದು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸರ್ಕಾರದ 10 ಲಕ್ಷ ರೂ. ಚೆಕ್ ಹಸ್ತಾಂತರ ಮಾಡಿ ಸಾಂತ್ವನ ಹೇಳಿದರು.
ಇದನ್ನೂ ಓದಿ:ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ.. ಮಂಡ್ಯದಲ್ಲಿ ಅನಧಿಕೃತ ಟ್ಯೂಷನ್ ಕೇಂದ್ರಗಳಿಗೆ ಬ್ರೇಕ್