ಮಂಡ್ಯ:ರಾಜ್ಯದಲ್ಲಿ ಕೋವಿಡ್‌ನ ಎರಡನೇ ಅಲೆ ಹೆಚ್ಚುತ್ತಿರುವುದರಿಂದ ವೈರಮುಡಿ ಬ್ರಹ್ಮೋತ್ಸವ ಸರಳವಾಗಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅಶ್ವಥಿ ಮಾಹಿತಿ ನೀಡಿದ್ದಾರೆ.
ಕೋವಿಡ್ 2ನೇ ಅಲೆ:ಈ ಬಾರಿ ಸರಳ ವೈರಮುಡಿ ಬ್ರಹ್ಮೋತ್ಸವ - ಸರಳ ವೈರಮುಡಿ ಬ್ರಹ್ಮೋತ್ಸವಕ್ಕೆ ನಿರ್ಧಾರ
ಕೋವಿಡ್ ಹಿನ್ನೆಲೆ ಈ ಬಾರಿ ವೈರಮುಡಿ ಬ್ರಹ್ಮೋತ್ಸವವನ್ನು ಸರಳವಾಗಿ ನಡೆಸಲು ಮಂಡ್ಯ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳುತ್ತಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಮಾಹಿತಿ ನೀಡಿದ್ದಾರೆ.
![ಕೋವಿಡ್ 2ನೇ ಅಲೆ:ಈ ಬಾರಿ ಸರಳ ವೈರಮುಡಿ ಬ್ರಹ್ಮೋತ್ಸವ mandya dc and sp ashwini pressmeet](https://etvbharatimages.akamaized.net/etvbharat/prod-images/768-512-11122700-thumbnail-3x2-mandya.jpg)
ಸರಳ ವೈರಮುಡಿ ಬ್ರಹ್ಮೋತ್ಸವಕ್ಕೆ ನಿರ್ಧಾರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಾರ್ಚ್ 19 ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭವಾಗಿದ್ದು, ನಾಳೆ ನಡೆಯುವ ಪ್ರಮುಖ ಕಿರೀಟ ಧಾರಣಾ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರ್ಕಾರ ನೀಡಿರುವ ಕೋವಿಡ್ ನಿರ್ದೇಶನಗಳನ್ನು ಕಟ್ಟನಿಟ್ಟಿನಿಂದ ಪಾಲನೆ ಮಾಡಲಾಗುತ್ತಿದೆ. ಸ್ಥಳೀಯರು ಮಾತ್ರ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದು ಹೊರ ಜಿಲ್ಲೆ, ಹೊರರಾಜ್ಯದ ಭಕ್ತರಿಗೆ ಅವಕಾಶ ಇರುವುದಿಲ್ಲ ಎಂದರು.
ಸರಳ ವೈರಮುಡಿ ಬ್ರಹ್ಮೋತ್ಸವಕ್ಕೆ ನಿರ್ಧಾರ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಮಾತನಾಡಿ, ವೈರಮುಡಿ ಬ್ರಹ್ಮೋತ್ಸವಕ್ಕೆ ಭದ್ರತೆ ಒದಗಿಸಲು 650 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಾಲ್ವರು ಡಿವೈಎಸ್‌ಪಿ, 16 ಸರ್ಕಲ್ ಇನ್‌ಸ್ಪೆಕ್ಟರ್‌ಗಳು, 31 ಸಬ್ ಇನ್‌ಸ್ಪೆಕ್ಟರ್‌ಗಳು, 100 ಎಎಸ್‌ಐಗಳು, 432 ಕಾನ್ಸ್ಟೇಬಲ್ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ದೇವಾಲಯದ ಒಳಗೆ ತೆರಳಲು ಹಾಗೂ ಹೊರ ಬರಲು ಪ್ರತ್ಯೇಕ ವ್ಯವಸ್ಥೆ ಇದ್ದು ಗೊಂದಲವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಉತ್ಸವಕ್ಕೆ ಬರುವ ಭಕ್ತರು ತಮ್ಮ ಜೊತೆಯಲ್ಲಿ ಗುರುತಿನ ಚೀಟಿಗಳನ್ನು ಇಟ್ಟುಕೊಂಡು ಬರಬೇಕು. ಇದರಿಂದ ಭಕ್ತರನ್ನು ಗುರುತಿಸಲು ಸುಲಭವಾಗುತ್ತದೆ. ಉತ್ಸವದಲ್ಲಿ ಕೆಲಸ ಮಾಡುವ ವಿವಿಧ ಇಲಾಖೆಗಳು ಸಿಬ್ಬಂದಿಗೆ ಪಾಸ್ ವಿತರಣೆ ಮಾಡಲಾಗಿದೆ. ಈ ಬಾರಿ ಉತ್ಸವದಲ್ಲಿ 2 ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.