ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿರುವ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಅಲ್ಲಿದ್ದ 7 ಹಿಟಾಚಿ ಹಾಗೂ 4 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ: 7 ಹಿಟಾಚಿ, 4 ಲಾರಿಗಳು ವಶಕ್ಕೆ - Mandya Latest News
ಮಂಡ್ಯದ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿರುವ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಟಿ.ವಿ.ಪುಷ್ಪಾ , ಅಲ್ಲಿದ್ದ 7 ಹಿಟಾಚಿ ಹಾಗೂ 4 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗದ ಹುಣಸೋಡು ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ಸ್ಫೋಟ ಹಿನ್ನೆಲೆ, ಜಿಲ್ಲಾಧಿಕಾರಿ ವೆಂಕಟೇಶ್ ನೇತೃತ್ವದ ತಂಡ ನಿನ್ನೆ ರಾತ್ರಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿತ್ತು. ಇಂದು ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ ಮೇರೆಗೆ ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಟಿ.ವಿ.ಪುಷ್ಪಾ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಹಲವರು ಪರಾರಿಯಾಗಿದ್ದು, ಅಲ್ಲಿದ್ದ 7 ಹಿಟಾಚಿ ಹಾಗೂ 4 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಹಿಟಾಚಿ ಮತ್ತು ಲಾರಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಲಾಗುವುದು ಎಂದು ಪಿಎಸ್‌ಐ ಕುಂಟೋಜಿ ತಿಳಿಸಿದ್ದಾರೆ.