ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಮೊದಲ ಬಾರಿಗೆ ಕೊರೊನಾ ಮರಣ ಮೃದಂಗ ಬಾರಿಸಿದ್ದು, ಒಂದೇ ದಿನ 19 ಜನರು ಕೋವಿಡ್‌ಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಮಹಾಸ್ಫೋಟ ಮುಂದುವರೆದಿದ್ದು, ಇಂದು 1,621 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 36,844 ಕ್ಕೆ ಏರಿಕೆಯಾಗಿದ್ದು, ಇಂದು 410 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ 28,288 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.