ಕರ್ನಾಟಕ

karnataka

ETV Bharat / state

ಮಂಡ್ಯ: ಸಹಪಾಠಿಗಳಿಂದಲೇ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಮಾಡಿ ಬ್ಲ್ಯಾಕ್​​ಮೇಲ್! - ​ ETV Bharat Karnataka

ಮದ್ದೂರಿನಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್. ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

By ETV Bharat Karnataka Team

Published : Nov 10, 2023, 1:22 PM IST

Updated : Nov 10, 2023, 1:29 PM IST

ಮಂಡ್ಯ:17 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಹಪಾಠಿಗಳೇ ಪುಸಲಾಯಿಸಿ ಕರೆತಂದು ಬಾಲಕಿ ಮೇಲೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಮದ್ದೂರಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಆರೋಪಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕೃತ್ಯದ ವಿಡಿಯೋ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಮೊಬೈಲ್‌ಗೆ ವಿಡಿಯೋ ಕಳುಹಿಸಿ ಬೆದರಿಕೆ ಹಾಕಿದ್ದಲ್ಲದೇ ಕರೆದಾಗ ಬರುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಇದಾದ ನಂತರ ಅಪ್ರಾಪ್ತೆ ನಡೆದ ಘಟನೆ ಬಗ್ಗೆ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಾಳೆ.

ನಂತರ ಸಂತ್ರಸ್ತೆಯ ಪೋಷಕರು ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಮೇಲೆ ಅತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ ಕೇಸ್ ದಾಖಲಿಸಲಾಗಿದೆ. ಮೂವರು ಆರೋಪಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ :ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ : ಆರೋಪಿ ಖುಲಾಸೆಗೊಳಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್​ಗೆ​ ಅರ್ಜಿ

Last Updated : Nov 10, 2023, 1:29 PM IST

ABOUT THE AUTHOR

...view details