ಮಂಡ್ಯ: ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದು ಸುಳ್ಳು ಹೇಳಿ ಸಂಸದೆ ಸುಮಲತಾ ಅವರು ಜಿಲ್ಲೆಯ ರೈತರಲ್ಲಿ ಆತಂಕ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರಚಾರಕ್ಕಾಗಿ ಸುಮಲತಾ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ: ಮಂಡ್ಯ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ - ಕೆಆರ್ಎಸ್ ಡ್ಯಾಂ ಬಿರುಕು
ಸಂಸದೆ ಸುಮಲತಾ ವಿರುದ್ದ ಮಂಡ್ಯ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
ಪ್ರಚಾರಕ್ಕಾಗಿ ಸಂಸದೆ ಸುಮಲತಾ ಅವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಜಿಲ್ಲೆಗೆ ನಿಮ್ಮ ಕೊಡುಗೆ ಏನು?, ಡ್ಯಾಂ ಬಗ್ಗೆ ಗೌರವ ಇರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ರಾಕ್‌ಲೈನ್ ವೆಂಕಟೇಶ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು, 'ಸೈಡ್ ಲೈನ್ ವೆಂಕಟೇಶ್' ಎಂದು ಕೂಗಿ ವ್ಯಂಗ್ಯವಾಡಿದರು.