ಮಂಡ್ಯ :ಮಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಬೆಡ್ ಸಿಗದೆ ಮೂರು ಗಂಟೆಯಿಂದ ಆಸ್ಪತ್ರೆ ಆವರಣದಲ್ಲಿ ವ್ಯಕ್ತಿಯೋರ್ವ ಕಾರಿನಲ್ಲಿ ಕುಳಿತು ನರಳಾಡಿದ್ದಾರೆ.
ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಸಹಳ್ಳಿ ಗ್ರಾಮದ ನಿವಾಸಿ ಮಹದೇವಪ್ಪ ಚಿಕಿತ್ಸೆ ಸಿಗದೆ ಕಾರನಲ್ಲಿ ನರಾಡುತ್ತಿರುವ ವ್ಯಕ್ತಿಯಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಮೂರು ದಿನಗಳಿಂದ ಮಳವಳ್ಳಿ ಆಸ್ಪತ್ರೆಗೆ ಅಲೆಯುತ್ತಿದ್ದ ಇವರು, ಕೊರೊನಾ ವರದಿ ನೆಗಿಟಿವ್ ಬಂದಿದೆ ಎಂಬ ಕಾರಣಕ್ಕೆ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.