ಮಂಡ್ಯ:ನೂತನ ಸಂಸದೆ ಸುಮಲತಾ ಅಂಬರೀಶ್ ತಮ್ಮ ಮೊದಲ ಜಿಲ್ಲಾ ಭೇಟಿಯಲ್ಲೇ ಜನರ ಗಮನ ಸೆಳೆದಿದ್ದಾರೆ.
ಸಂಸದೆಯಾಗಿ ಮೊದಲ ಭೇಟಿಯಲ್ಲೇ ಮಂಡ್ಯ ಜನರ ಗಮನ ಸೆಳೆದ ಸುಮಲತಾ - ಸುಮಲತಾ ಅಂಬರೀಶ್
ಮಂಡ್ಯ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಬಿ.ಹೊಸೂರು ಗ್ರಾಮದ ಕೇಂದ್ರೀಯ ವಿದ್ಯಾಲಯಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.
ಕೇಂದ್ರೀಯ ವಿದ್ಯಾಲಯಕ್ಕೆ ಭೇಟಿ
ಇಂದು ಕೀಲಾರ ಗ್ರಾಮದ ಸರ್ಕಾರಿ ಕಾರ್ಯಕ್ರಮದ ನಂತರ ಬಿ.ಹೊಸೂರು ಗ್ರಾಮದ ಕೇಂದ್ರೀಯ ವಿದ್ಯಾಲಯಕ್ಕೆ ಭೇಟಿ ನೀಡಿದ್ದ ಅವರು, ಮಾಹಿತಿ ಕಲೆಹಾಕಿದರು. ಪ್ರಾಂಶುಪಾಲರಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಬಳಿಕ ವಿದ್ಯಾರ್ಥಿಗಳ ಶೌಚಾಲಯ ಪರಿಶೀಲಿಸಿ ಅಲ್ಲಿನ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಸುಮಲತಾ, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು. ಕಟ್ಟಡ ಕಾಮಗಾರಿಗೆ ಕ್ರಮ ಕೈಗೊಳ್ಳೋದಾಗಿ ಭರವಸೆ ನೀಡಿದ್ರು.