ಮಂಡ್ಯ: ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಬೋನಿಗೆ ಬಿದ್ದ ಚಿರತೆ... ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - ಪಾಂಡವಪುರ
ಹಲವು ದಿನಗಳಿಂದ ಗ್ರಾಮಕ್ಕೆ ಬಂದು ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿದ್ದು ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಚಿರತೆ
ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿ ಗ್ರಾಮದಲ್ಲಿಟ್ಟಿದ್ದ ಬೋನಿಗೆ ಚಿರತೆ ಬಿದ್ದಿದ್ದು, ಹಲವು ದಿನಗಳಿಂದ ಗ್ರಾಮಕ್ಕೆ ಬಂದು ಉಪಟಳ ನೀಡುತ್ತಿತ್ತು.
ಚಿರತೆ ಹಾವಳಿಯಿಂದ ಕೆಂಗೆಟ್ಟಿದ್ದ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಬೋನು ಇಡಲಾಗಿತ್ತು.
ರಾತ್ರಿ ಬೋನಿನಲ್ಲಿದ್ದ ನಾಯಿ ತಿನ್ನಲು ಬಂದು ಚಿರತೆ ಸೆರೆಯಾಗಿದೆ. ಸೆರೆ ಸಿಕ್ಕ ಚಿರತೆಯನ್ನು ಬಂಡೀಪುರದ ಅರಣ್ಯಕ್ಕೆ ಬಿಡಲು ಅಧಿಕಾರಿಗಳ ತೀರ್ಮಾನಿಸಿದ್ದಾರೆ.