ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಬಾವುಟ ಹಾರಿಸಿದ ಹಿನ್ನೆಲೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಮುಂದಾಗಿದ್ದು, ಇದರ ಮೊದಲ ಹಂತವೆಂಬಂತೆ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ದೋಸ್ತಿ ಮಾಡಿಕೊಂಡು ಬಿಜೆಪಿಯನ್ನು ಅಧಿಕಾರದಿಂದ ತಪ್ಪಿಸಿದೆ.
ಕೆ.ಆರ್.ಪೇಟೆ ಪಿಎಲ್ಡಿ ಬ್ಯಾಂಕ್ ಚುನಾವಣೆ: ಗೆದ್ದು ಬೀಗಿದ ಕೈ-ದಳ ಮೈತ್ರಿ - ಕೆ.ಆರ್.ಪೇಟೆ ಪಿಎಲ್ಡಿ ಬ್ಯಾಂಕ್ ಚುನಾವಣೆ ಕೈ-ದಳ ಮೈತ್ರಿಗೆ ಜಯ
ಕೆ.ಆರ್.ಪೇಟೆ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಕಾಂಗ್ರೆಸ್ನ ಗೋವಿಂದರಾಜು ಅಧ್ಯಕ್ಷರಾದರೆ, ಜೆಡಿಸ್ನ ಧನಂಜಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
![ಕೆ.ಆರ್.ಪೇಟೆ ಪಿಎಲ್ಡಿ ಬ್ಯಾಂಕ್ ಚುನಾವಣೆ: ಗೆದ್ದು ಬೀಗಿದ ಕೈ-ದಳ ಮೈತ್ರಿ Mandya PLD Bank Election Cong-JDS AllianceMandya PLD Bank Election Cong-JDS Alliance](https://etvbharatimages.akamaized.net/etvbharat/prod-images/768-512-6128195-thumbnail-3x2-hrs.jpg)
ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದು ಬೀಗಿದ ಕೈ-ದಳ ಮೈತ್ರಿ
ಕೆ.ಆರ್.ಪೇಟೆ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಕಾಂಗ್ರೆಸ್ನ ಗೋವಿಂದರಾಜು ಅಧ್ಯಕ್ಷರಾದರೆ, ಜೆಡಿಸ್ನ ಧನಂಜಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದು ಬೀಗಿದ ಕೈ-ದಳ ಮೈತ್ರಿ
ಮೈತ್ರಿ ಅಭ್ಯರ್ಥಿಗಳು ಆಯ್ಕೆ ಆಗುತ್ತಿದ್ದಂತೆ ಉಭಯ ಪಕ್ಷಗಳ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಹೀಗಾಗಿ ಎಲ್ಲಿ ಪಿಎಲ್ಡಿ ಬ್ಯಾಂಕ್ ಅಧಿಕಾರ ಕೈ ಬಿಟ್ಟು ಹೋಗುತ್ತದೋ ಎಂಬ ಆತಂಕ ಕೈ-ದಳವನ್ನು ಕಂಗೆಡಿಸಿತ್ತು.