ಮಂಡ್ಯ: ಕೋವಿಡ್-19 ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿವೆ.
ಮಂಡ್ಯದಲ್ಲಿ ರಸ್ತೆಗಿಳಿದ ಪೊಲೀಸರು: ಜಾಗೃತಿ ಜೊತೆಗೆ ಎಚ್ಚರಿಕೆ - ಕೋವಿಡ್19
ರಾಷ್ಟ್ರೀಯ ಹೆದ್ದಾರಿ ಬದಿಯ ಎಲ್ಲಾ ಅಂಗಡಿಗಳ ಬಂದ್ಗೆ ಸೂಚನೆ ನೀಡಿಲಾಗಿದೆ. ಪ್ರಮುಖ ವೃತ್ತಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ.
ಪೊಲೀಸ್
ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಬದಿಯ ಎಲ್ಲಾ ಅಂಗಡಿಗಳ ಬಂದ್ಗೆ ಸೂಚನೆ ನೀಡಿಲಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಇನ್ನು ಪೊಲೀಸ್ ಇಲಾಖೆ ಪ್ರಮುಖ ವೃತ್ತಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಸಾರ್ವಜನಿರಕು ಸಹಕರಿಸುವಂತೆ ಮನವಿ ಮಾಡಲಾಗುತ್ತಿದೆ.
ನಗರದಲ್ಲಿ ಸಂಚಾರಿ ಪೊಲೀಸರು ವಾಹನಗಳನ್ನು ನಿಲ್ಲಿಸಿ ಮುನ್ನೆಚ್ಚರಿಕೆ ಮಾಹಿತಿ ನೀಡಿದರು. ಮತ್ತೊಂದು ಕಡೆ ಪೊಲೀಸ್ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೈಕ್ ಮೂಲಕ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಅಂಗಡಿ ಮಾಲೀಕರಿಗೆ ಪ್ರಕರಣ ದಾಖಲು ಮಾಡುವ ಎಚ್ಚರಿಕೆ ನೀಡಲಾಗುತ್ತಿದೆ.
Last Updated : Mar 26, 2020, 12:58 PM IST