ಮಂಡ್ಯ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಎರಡು ಕಡೆ ಪ್ರತ್ಯೇಕ ಪ್ರತಿಭಟನೆಗಳು ನಡೆದವು.
ವೇತನ ನೀಡುವಂತೆ ಆಗ್ರಹಿಸಿ ನೀರುಗಂಟಿಗಳು ಮದ್ದೂರು ಪಟ್ಟಣದಲ್ಲಿ ಪ್ರತಿಭಟನೆ ಮಾಡಿದರೆ, ಹುದ್ದೆ ಕಾಯಂಗೆ ಆಗ್ರಹಿಸಿ ಗ್ರಾಮ ಸಹಾಯಕರು ನಗರದಲ್ಲಿ ಪ್ರತಿಭಟನೆ ಮಾಡಿದರು.

ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ಬಳಿಯ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆ ಧರಣಿ ನಡೆಸಿದ ನೀರುಗಂಟಿಗಳು, 4 ತಿಂಗಳಿನಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಇತ್ತ ಕೆಲಸದ ಒತ್ತಡ ಹೆಚ್ಚಾಗಿದೆ. ಆದರೂ ನಾವು ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ಕಾಯಂ ಮಾಡಿ ಎಂದು ಗ್ರಾಮ ಲೆಕ್ಕಿಗರು ಮತ್ತು ಸಹಾಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯ ಬಳಿಕ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
TAGGED:
Mandya_protest