ಮಂಡ್ಯ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವಿಗೀಡಾಗಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಾಸಲು ಗ್ರಾಮದ ಬಳಿ ನಡೆದಿದೆ.
ಸಾಸಲು ಗ್ರಾಮದ ಮಧು (20) ಮತ್ತು ಹಾಲದಹಳ್ಳಿಯ ದರ್ಶನ್ (21) ಮೃತ ದುರ್ದೈವಿಗಳು. ಇಬ್ಬರು ಬೇರೆ ಬೇರೆ ಬೈಕ್‌ಗಳಲ್ಲಿ ಅತಿವೇಗದಿಂದ ಸಂಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಆಯತಪ್ಪಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಎರಡೂ ಬೈಕ್‌ಗಳ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.