ಕರ್ನಾಟಕ

karnataka

ETV Bharat / state

ಕಿಡಿಗೇಡಿಗಳಿಗೆ ಮಂಡ್ಯ ಎಸ್ಪಿ ಖಡಕ್ ವಾರ್ನಿಂಗ್! - social media

ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಟ್ಟ ಮಂಡ್ಯ ಪೊಲೀಸರು..

warning notice
ಪೊಲೀಸ್​ ಪ್ರಕಟಣೆ

By

Published : Feb 12, 2022, 3:43 PM IST

ಮಂಡ್ಯ: ಮಂಡ್ಯ ಎಸ್ಪಿ ಖಡಕ್ ವಾರ್ನಿಂಗ್!. ರಾಜ್ಯಾದ್ಯಂತ ವಿವಾದಾತ್ಮಕವಾಗಿರುವ ಹಿಜಾಬ್​-ಕೇಸರಿ ಶಾಲು ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ಮತ್ತು ಚಿತ್ರಗಳನ್ನು ಪೋಸ್ಟ್​ ಮಾಡಿದಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಮಂಡ್ಯ ಪೊಲೀಸ್​ ವರಿಷ್ಠರು ಆದೇಶ ಹೊರಡಿಸಿದ್ದಾರೆ.

ಪೊಲೀಸ್​ ಪ್ರಕಟಣೆ

ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಟ್ಟ ಮಂಡ್ಯ ಪೊಲೀಸರು, ಟ್ವಿಟರ್, ಫೇಸ್‌ಬುಕ್, ವಾಟ್ಸ್‌ಆ್ಯಪ್, ಇನ್ಸ್ಟಾಗ್ರಾಮ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾವಹಿಸುವಂತೆ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.

ವಿವಾದಾತ್ಮಕ ಪೋಸ್ಟರ್, ಪ್ರಚೋದನಾಕಾರಿ ಹೇಳಿಕೆ, ವಿಡಿಯೋ ಹಾಕಿದರೆ ಮತ್ತು ಪ್ರಚೋದನೆ ನೀಡಿ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ರೌಡಿಶೀಟರ್​ ಹಾಗೂ ಕಮ್ಯುನಲ್​ ಗೂಂಡಾ ಶೀಟ್​ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿವಾದಾತ್ಮಕ ಪೋಸ್ಟರ್, ಪ್ರಚೋದನಾಕಾರಿ ಹೇಳಿಕೆ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ತಿಳಿಸಿದ್ದಾರೆ.

ಓದಿ:ಕಮಿಷನ್​​ ಆರೋಪ: ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ ಹರತಾಳು ಹಾಲಪ್ಪ - ಬೇಳೂರು ಗೋಪಾಲಕೃಷ್ಣ

ABOUT THE AUTHOR

...view details