ಮಂಡ್ಯ :ಯುಗಾದಿ ಹಬ್ಬದಂದು ಯಾರಾದರೂ ಜೂಜಾಟದಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಂಡ್ಯ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಜಿಲ್ಲಾದ್ಯಂತ ಯುಗಾದಿ ಹಬ್ಬದ ವೇಳೆಯಲ್ಲಿ ಕ್ಲಬ್, ಮನೆ, ಹೋಟೆಲ್, ಗದ್ದೆ ಬಯಲು ಇನ್ನಿತರ ಸ್ಥಳಗಳಲ್ಲಿ ಜೂಜಾಟ ನಡೆಯುವ ಬಗ್ಗೆ ದೂರುಗಳು ಬಂದಿವೆ.
ಜೂಜಾಟ ಕಾನೂನು ಬಾಹಿರವಾಗಿದ್ದು, ನಿಯಮ ಮೀರಿ ಜೂಜಾಟದಲ್ಲಿ ಪಾಲ್ಗೊಂಡರೆ ಅಂತವರ ವಿರುದ್ಧ ಇಲಾಖೆ ಕಠಿಣ ಕಾನೂನು ಕ್ರಮಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಜೂಜಾಟಕ್ಕೆ ಬ್ರೇಕ್ ಬಿದ್ದಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲೂ ಜೂಜಾಟಕ್ಕೆ ಅವಕಾಶ ನೀಡಿಲ್ಲ.