ಮಂಡ್ಯ: ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡಿರುವ ಮಂಡ್ಯ ತಹಶೀಲ್ದಾರ್ ಚಂದ್ರಶೇಖರ ಶಂಗಾಳಿ ಅವರು ಜಿಲ್ಲಾಧಿಕಾರಿ ಆದೇಶಕ್ಕೆ ಕ್ಯಾರೇ ಎನ್ನದೆ ಕೋವಿಡ್ ನಿಯಮ ಉಲ್ಲಂಘಿಸಿ ಮಗನ ಹುಟ್ಟುಹಬ್ಬ ಆಚರಣೆ ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಕೋವಿಡ್ ನಿಯಮ ಉಲ್ಲಂಘಿಸಿ ಮಗನ ಹುಟ್ಟುಹಬ್ಬ ಆಚರಿಸಿದ ಮಂಡ್ಯ ತಹಶೀಲ್ದಾರ್ - ಮಂಡ್ಯ ತಹಶೀಲ್ದಾರ್ ಚಂದ್ರಶೇಖರ ಶಂಗಾಳಿ
ಮಂಡ್ಯ ತಹಶೀಲ್ದಾರ್ ಚಂದ್ರಶೇಖರ ಶಂಗಾಳಿ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿಯಾಗಿ ಮಗನ ಹುಟ್ಟುಹಬ್ಬ ಆಚರಣೆ ಮಾಡಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ತಹಶೀಲ್ದಾರ್ ಚಂದ್ರಶೇಖರ ಶಂಗಾಳಿ ಅವರು ಶ್ರೀರಂಗಪಟ್ಟಣ ತಾಲೂಕಿನ KRS ಬೃಂದಾವನದಲ್ಲಿರುವ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಬುಧವಾರ ಸಂಜೆ ನೂರಾರು ಜನರ ಸಮ್ಮುಖದಲ್ಲಿ ಭರ್ಜರಿಯಾಗಿ ಪಾರ್ಟಿ ಮಾಡಿ, ಮಗನ ಹುಟ್ಟುಹಬ್ಬ ಆಚರಿಸುವ ಮೂಲಕ ಕೋವಿಡ್ ನಿಯಮಾವಳಿ ಗಾಳಿಗೆ ತೂರಿದ್ದಾರೆ. ಅಷ್ಟೇ ಅಲ್ಲದೆ, ಕಾರ್ಯಕ್ರಮಕ್ಕೆ ಆಗಮಿಸಿದವರು ಸಹ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲನೆ ಮಾಡದೇ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪಾಂಡವಪುರ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳು, ಸಂಘಟನೆಗಳ ಮುಖ್ಯಸ್ಥರು ಭಾಗಿಯಾಗಿದ್ದರು. ಆದರೆ ಯಾವುದೇ ಕಾರ್ಯಕ್ರಮಗಳಲ್ಲಿ 30 ಜನರಿಗಿಂತ ಹೆಚ್ಚು ಮಂದಿ ಸೇರದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಕೋವಿಡ್ ನಿಯಮ ಪಾಲಿಸಬೇಕಾದ ತಹಶೀಲ್ದಾರ್ ಅವರೇ ನಿಯಮ ಉಲ್ಲಂಘಿಸಿರುವುದರಿಂದ ಡಿಸಿ ಕಾನೂನು ಕ್ರಮ ತೆಗೆದುಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.