ಮಂಡ್ಯ:ತಾಲೂಕಿನ ಹೊಳಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ತಾಲೂಕು ಆರೋಗ್ಯಾಧಿಕಾರಿ, ಮುಂಗಡ ಹಾಜರಾತಿ ಹಾಕಿದ್ದ ವೈದ್ಯನ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ.
ಹೊಳಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರವಿಕುಮಾರ್ ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ತವ್ಯಕ್ಕೆ ಹಾಜರಾಗದೇ ಕಣ್ಮರೆಯಾಗಿದ್ದ. ಜೊತೆಗೆ ಒಂದು ವಾರದ ಹಾಜರಾತಿಯನ್ನು ಮುಂಗಡವಾಗಿ ಹಾಕಿ ತೆರಳಿದ್ದ. ಸಾರ್ವಜನಿಕರು ಆಸ್ಪತ್ರೆಗೆ ಬಂದು ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಈಟಿವಿ ಭಾರತ ವರದಿ ಪ್ರಕಟಿಸಿತ್ತು. ಅಲ್ಲದೆ, ಸಾರ್ವಜನಿಕ ವಲಯದಲ್ಲಿಯೂ ಆಕ್ರೋಶ ವ್ಯಕ್ತವಾಗಿತ್ತು.