ಮಂಡ್ಯ: ಕೆ ಆರ್ ಎಸ್ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ಮುಳುಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿಯ ವೇಣುಗೋಪಾಲ ಸ್ವಾಮಿ ದೇವಾಲಯದ ಬಳಿ ಇಂದು ನಡೆದಿದೆ. ಹರೀಶ್(32), ನಂಜುಂಡ, ಜ್ಯೋತಿ (18) ನೀರಿನಲ್ಲಿ ಮುಳುಗಿ ಮೃತಪಟ್ಟವರು. ಜ್ಯೋತಿ ಹಾಗೂ ನಂಜುಂಡ ಎಂಬುವರ ಶವ ಹೊರತೆಗೆಯಲಾಗಿದೆ. ಹರೀಶ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಮೈಸೂರಿನಿಂದ ಪ್ರವಾಸಕ್ಕೆಂದು ಎನ್‌ಜಿಒ ಕಡೆಯಿಂದ 20ಕ್ಕೂ ಹೆಚ್ಚು ಜನರು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಕೆಆರ್ಎಸ್ ಹಿನ್ನೀರಿನಲ್ಲಿ ಈಜುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಸದ್ಯ ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.