ಮಂಡ್ಯ:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನನಿಬಿಡ ಪ್ರದೇಶ ಸೇರಿದಂತೆ ಅತಿಸೂಕ್ಷ್ಮ ಸ್ಥಳಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.
ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಕೆಆರ್ಎಸ್ನಲ್ಲಿ ಪೊಲೀಸ್ ಭದ್ರತೆ ಹೆಚ್ಚಳ - ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನನಿಬಿಡ ಪ್ರದೇಶ ಸೇರಿದಂತೆ ಅತಿಸೂಕ್ಷ್ಮ ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದಾರೆ.

police take action in KRS dam
ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಕೆಆರ್ಎಸ್ನಲ್ಲಿ ಪೊಲೀಸ್ ಭದ್ರತೆ ಹೆಚ್ಚಳ
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಕೆಆರ್ಎಸ್ನಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ತಪಾಸಣೆ ಮಾಡಿ ಮುನ್ನೆಚ್ಚರಿಕೆ ವಹಿಸಿದ್ದು, ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಭದ್ರತೆಯಲ್ಲಿ ಕೆಆರ್ಎಸ್ಗೆ ಭದ್ರತೆ ಒದಗಿಸಲಾಗಿದೆ. ಸಿಬ್ಬಂದಿ ಪ್ರವಾಸಿಗರ ಮೇಲೆ ನಿಗಾ ಇಟ್ಟಿದ್ದಾರೆ.
ಕೆಆರ್ಎಸ್ನ ಪ್ರವಾಸಿಗರ ದ್ವಾರ, ಉತ್ತರ ಮತ್ತು ದಕ್ಷಿಣ ದ್ವಾರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದ್ದು, ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ತಪಾಸಣೆ ಮಾಡಲಾಗಿದೆ. ಅನುಮಾನ ಬಂದ ಪ್ರವಾಸಿಗರನ್ನು ಪ್ರಶ್ನಿಸಿ ಒಳಗೆ ಬಿಡಲಾಗುತ್ತಿದೆ. ನಗರದ ರೈಲ್ವೆ ನಿಲ್ದಾಣದಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
Last Updated : Jan 21, 2020, 12:06 AM IST