ಮಂಡ್ಯ:ಪ್ರವಾಸಕ್ಕೆ ತೆರಳಿದ್ದ ಮಿನಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿ, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ.
ನಾಗಮಂಗಲ ಬಳಿ ಮಿನಿ ಬಸ್ ಪಲ್ಟಿ: ಇಬ್ಬರು ಪ್ರವಾಸಿಗರು ಸಾವು - mini bus over turns in Nagamangala
ಪ್ರವಾಸ ಮುಗಿಸಿ ಹೊಸಕೋಟೆಗೆ ತೆರಳುತ್ತಿದ್ದ ಮಿನಿ ಬಸ್ಸೊಂದು ಕದಬಹಳ್ಳಿ ಬಳಿ ಪಲ್ಟಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಪಲ್ಟಿಯಾದ ಬಸ್
ಬೆಂಗಳೂರು-ಹೊಸಕೋಟೆ ಮೂಲದ ಗೌತಮ್(20) ಹಾಗೂ ದರ್ಶನ್(17) ಮೃತರು. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು ಪ್ರವಾಸ ಮುಗಿಸಿ ವಾಪಸ್ ಹೊಸಕೋಟೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬೆಳ್ಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.