ಕರ್ನಾಟಕ

karnataka

ETV Bharat / state

ಸಚಿವ ಡಾ.ನಾರಾಯಣಗೌಡಗೆ ಕೋವಿಡ್ ಪಾಸಿಟಿವ್​ - ಕರ್ನಾಟಕ ಕೋವಿಡ್ 19 ಪ್ರಕರಣಗಳ ಸಂಖ್ಯೆ

ಸಚಿವ ಡಾ.ನಾರಾಯಣಗೌಡ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ನಾರಾಯಣಗೌಡ
ನಾರಾಯಣಗೌಡ

By

Published : Jan 13, 2022, 10:29 AM IST

ಮಂಡ್ಯ: ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೊನಾ ಹೆಚ್ಚಾದ ಹಿನ್ನೆಲೆ ಜಿಲ್ಲೆಯ ಹಲವಾರು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದೆ. ಈ ಸಂದರ್ಭದಲ್ಲಿ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿದ್ದು, ಕೋವಿಡ್​ ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 2,47,417 ಮಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿದ್ದು, 380 ಜನರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಸಕ್ರಿಯ ಸೋಂಕಿತರ ಸಂಖ್ಯೆ 11,17,531ಕ್ಕೆ ಏರಿಕೆಯಾಗಿದೆ.

ಓದಿ:ಕೊರೊನಾ ಟೆಸ್ಟ್​ಗೆ OK.. ನೋಟಿಸ್​ಗೆ NO... ಡಿಕೆಶಿ ಮನೆಗೆ ನೋಟಿಸ್ ಅಂಟಿಸಿದ ಅಧಿಕಾರಿಗಳು

ABOUT THE AUTHOR

...view details