ಕರ್ನಾಟಕ

karnataka

ETV Bharat / state

ಕೊರೊನಾ ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲು ಮಂಡ್ಯಕ್ಕೆ ಸಚಿವರ ಭೇಟಿ - Health Minister Sriramulu

ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಮಂಡ್ಯ ಜಿಲ್ಲೆಗೆ ಬೇಟಿ ನೀಡಿ, ಕೊರೊನಾ ವೈರಸ್​ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ್ರು.

By

Published : Mar 28, 2020, 6:04 PM IST

ಮಂಡ್ಯ:ಕೊರೊನಾ ಮಾಹಿತಿ ಸಂಗ್ರಹ ಕುರಿತು ಇಬ್ಬರು ಸಚಿವರು ಇಂದು ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ರು.

ಮೊದಲು ಸಚಿವ ಕೆ.ಸಿ.ನಾರಾಯಣಗೌಡ ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಸಂಗ್ರಹ ಮಾಡಿದರು. ಸರ್ಕಾರದಿಂದ ಯಾವುದೇ ಸಹಾಯ ಬೇಕಾದರೂ ಮಾಡಿಸುವ ಭರವಸೆಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇತ್ತ ಆರೋಗ್ಯ ಸಚಿವ ಶ್ರೀರಾಮುಲು ಡಿಸಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ನಂತರ ಮಿಮ್ಸ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ABOUT THE AUTHOR

...view details