ಮಂಡ್ಯ:ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಇಂದು ಕೊರೊನಾ ಪೀಡಿತ ಪತ್ತೆಯಾದ ವಾರ್ಡ್ಗೆ ಭೇಟಿ ನೀಡಿ ಅಧಿಕಾರಿಗಳ ಮಾಹಿತಿ ಪಡೆದುಕೊಂಡರು.
ಖುದ್ದು ಪರಿಶೀಲನೆ ನಡೆಸಿದ ಸಚಿವ; ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಶಾಸಕರು - ಮಂಡ್ಯ ಲೆಟೆಸ್ಟ್ ನ್ಯೂಸ್
ಕೆ.ಸಿ. ನಾರಾಯಣಗೌಡ ಮಂಡ್ಯ ಉಸ್ತುವಾರಿ ಸಚಿವರಾಗಿ ನಿಯೋಜನೆಗೊಂಡ ನಂತರ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ್ದು, ಸ್ವರ್ಣಸಂದ್ರ ಬಡಾವಣೆಗೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಕೆಲ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ಜರುಗಿತು.
ಮಂಡ್ಯ ಉಸ್ತುವಾರಿ ಸಚಿವರಾಗಿ ನಿಯೋಜನೆಗೊಂಡ ನಂತರ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ್ದು, ಸ್ವರ್ಣಸಂದ್ರ ಬಡಾವಣೆಗೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳ ಜೊತೆ ವಾರ್ಡ್ಗೆ ತೆರಳಿ ಸ್ವಚ್ಛತೆ ಸೇರಿದಂತೆ ಇನ್ನಿತರ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ಮಾಡಿದ್ದಾರೆ. ಕೊರೊನಾ ಸಾಮೂಹಿಕವಾಗಿ ಹರಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಸ್ವರ್ಣಸಂದ್ರ ಬಡಾವಣೆಯ ಮೇಲೆ ಹದ್ದಿನ ಕಣ್ಣಿಡುವಂತೆ ಸೂಚಿಸಿದರು. ಸ್ವರ್ಣಸಂದ್ರ ಭೇಟಿ ನಂತರ, ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಬೆ ನಡೆಸಿದರು.
ಸ್ಥಳೀಯ ಎಂಎಲ್ಎಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮ ಹಾಗೂ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಮಾಜಿ ಸಚಿವ ಪುಟ್ಟರಾಜು, ಶಾಸಕ ಅನ್ನದಾನಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು. ಪಡಿತರ ವಿತರಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ಅಂತಹ ಪಡಿತರ ವಿತರಣೆ ಮಾಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದರು.