ಕರ್ನಾಟಕ

karnataka

ETV Bharat / state

ಭಾನುವಾರದ ಲಾಕ್‌ಡೌನ್​ಗೆ ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ - corona news in mandya

ಮಂಡ್ಯದಲ್ಲಿ ದಿನ ಬಳಕೆ ವಸ್ತುಗಳ ವ್ಯಾಪಾರ ಎಂದಿನಂತೆ ನಡೆಯುತ್ತಿದೆ‌. ಕೆಲವು ವ್ಯಾಪಾರಿಗಳು ಅಂಗಡಿ ಮುಂಗಟ್ಟು ಬಂದ್​ ಮಾಡಿ ಲಾಕ್‌ಡೌನ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

sunday-lockdown
ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

By

Published : Jul 12, 2020, 1:15 PM IST

ಮಂಡ್ಯ: ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಘೋಷಿಸಿರುವ ಭಾನುವಾರದ ಲಾಕ್‌ಡೌನ್‌ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಿನ ಬಳಕೆ ವಸ್ತುಗಳ ವ್ಯಾಪಾರ ಎಂದಿನಂತೆ ನಡೆಯುತ್ತಿದೆ‌. ಕೆಲವು ವ್ಯಾಪಾರಿಗಳು ಅಂಗಡಿ ಮುಂಗಟ್ಟು ಬಂದ್​ ಮಾಡಿ ಲಾಕ್‌ಡೌನ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಗರದ ವಿಶ್ವೇಶ್ವರಯ್ಯ ರಸ್ತೆ, ಅಂಬೇಡ್ಕರ್ ರಸ್ತೆ, ಪೇಟೆ ಬೀದಿ ಹಾಗೂ ಗುತ್ತಲು ರಸ್ತೆಯಲ್ಲಿ ಲಾಕ್‌ಡೌನ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೋ ರೂಂ‌ಗಳು, ಹೋಟೆಲ್‌ಗಳು ಬಂದ್ ಆಗಿವೆ. ತರಕಾರಿ ವ್ಯಾಪಾರಿಗಳು, ಮಟನ್ ಸ್ಟಾಲ್‌ಗಳು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸುತ್ತಿದ್ದರು.

ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

ತಾಲೂಕು ಕೇಂದ್ರಗಳಾದ ಮದ್ದೂರು, ಮಳವಳ್ಳಿ, ನಾಗಮಂಗಲ, ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ಸೇರಿದಂತೆ ಪ್ರಮುಖ ಗ್ರಾಮಾಂತರ ಪ್ರದೇಶದಲ್ಲಿ ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ABOUT THE AUTHOR

...view details