ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕು ನಿಯಂತ್ರಣ ಕುರಿತು ಶಾಸಕ ಡಿ.ಸಿ ತಮ್ಮಣ್ಣ ಸಭೆ - Corona infection control

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

MLA D. C. Tammanna addressed meeting to control corona
ಕೊರೊನಾ ಸೋಂಕು ನಿಯಂತ್ರಣ ಕುರಿತು ಶಾಸಕ ಡಿ. ಸಿ. ತಮ್ಮಣ್ಣ ಸಭೆ

By

Published : Jul 4, 2020, 1:19 PM IST

ಮಂಡ್ಯ:ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಸೋಂಕು ನಿಯಂತ್ರಿಸುವ ಕುರಿತು ಮದ್ದೂರು ಶಾಸಕ ಡಿ. ಸಿ. ತಮ್ಮಣ್ಣ ಅಧಿಕಾರಿಗಳೊಂದಿಗೆ ಸಭೆ ಮಾಡಿ ಮಾಹಿತಿ ಸಂಗ್ರಹಿಸಿದರು.

ಕೊರೊನಾ ಸೋಂಕು ನಿಯಂತ್ರಣ ಕುರಿತು ಶಾಸಕ ಡಿ. ಸಿ. ತಮ್ಮಣ್ಣ ಸಭೆ

ಸಭೆಯಲ್ಲಿ ಕೊರೊನಾ ನಿಯಂತ್ರಿಸುವ ಸಲುವಾಗಿ ಕ್ವಾರಂಟೈನ್‌ನಲ್ಲಿ ಇರುವವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಲಾಯಿತು. ಸೋಂಕು ಹರಡದಂತೆ ನೋಡಿಕೊಳ್ಳಲು ಕಟ್ಟೆಚ್ಚರವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರದೊಂದಿಗೆ ವ್ಯಾಪಾರ ವಿನಿಮಯ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ತಹಶೀಲ್ದಾರ್ ವಿಜಯಕುಮಾರ್ ಹಾಗೂ ಇತರೆ ಅಧಿಕಾರಿಗಳಿದ್ದರು.

ABOUT THE AUTHOR

...view details