ಕರ್ನಾಟಕ

karnataka

ETV Bharat / state

ಹುಟ್ಟೂರಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ: ಸಿಬ್ಬಂದಿಗೆ ಫುಲ್ ಕ್ಲಾಸ್​ - ಶ್ರೀರಂಗಪಟ್ಟಣ

ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ, ಅವ್ಯವಸ್ತೆ ಕಂಡು ಸಿಬ್ಬಂದಿಗೆ ಫುಲ್ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಶಾಸಕ ರವೀಂದ್ರ ಶ್ರೀಕಂಠಯ್ಯ

By

Published : Sep 9, 2019, 4:35 PM IST

ಮಂಡ್ಯ: ಜೆಡಿಎಸ್ ಶಾಸಕ ತಮ್ಮ ಹುಟ್ಟೂರಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಅರಕೆರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ

ಶಾಸಕ ರವೀಂದ್ರ ಶ್ರೀಕಂಠಯ್ಯ ತಮ್ಮ ಹುಟ್ಟುರಾದ ಅರಕೆರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಕಳಪೆ ಗುಣಮಟ್ಟದಿಂದ ಕೂಡಿದ ರೋಗಿಗಳ ಬೆಡ್​ಗಳನ್ನ ಕಂಡು ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಆದರೆ ದಿಂಬು, ಬೆಡ್ ಕಳಪೆಯಿಂದ ಕೂಡಿದೆ. ಇದನ್ನು ಸರಬರಾಜು ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ, ಔಷಧ ಗುಣಮಟ್ಟ ಹಾಗೂ ಸರಬರಾಜು ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ ಸಾರ್ವಜನಿಕರು ತಮಗಾಗುತ್ತಿರುವ ತೊಂದರೆಗಳನ್ನ ಶಾಸಕರ ಗಮನಕ್ಕೆ ತಂದರು. ಕೂಡಲೇ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ABOUT THE AUTHOR

...view details