ಮಂಡ್ಯ :ಜನಸ್ಪಂದನ ಕಾರ್ಯಕ್ರಮದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳನ್ನ ಶಾಸಕ ರವೀಂದ್ರ ಶ್ರೀಕಂಠಯ್ಯ ತರಾಟೆಗೆ ತೆಗೆದುಕೊಂಡರು.
ಕೆಲಸ ಮಾಡಿಕೊಡಲು ಲಂಚ ಪಡೆಯುತ್ತಿದ್ದೀರಾ.. ಅಧಿಕಾರಿಗಳ ವಿರುದ್ಧ ಶಾಸಕರು ಗರಂ - ಶಾಸಕ ರವೀಂದ್ರ ಶ್ರೀಕಂಠಯ್ಯ
ಕಂದಾಯ ಇಲಾಖೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಮನವಿ ಸಲ್ಲಿಸಿದ್ದರು. ಆದ್ರೆ, ಜನರ ಸಮಸ್ಯೆಗಳನ್ನ ಪರಿ ಹರಿಸದೆ ವಿಳಂಬ ಮಾಡಿದ್ದೀರಾ, ಕೆಲಸ ಮಾಡಿಕೊಡಲು ಲಂಚ ಪಡೆಯುತ್ತಿದ್ದೀರಾ ಎಂದು ಅಧಿಕಾರಿಗಳ ವಿರುದ್ಧ ಶಾಸಕರು ಹರಿಹಾಯ್ದುರು..
ಜನಸ್ಪಂದನ ಕಾರ್ಯಕ್ರಮ
ಶ್ರೀರಂಗಪಟ್ಟಣ ತಾಲೂಕು ಕಚೇರಿಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ತಹಶೀಲ್ದಾರ್ ರೂಪಾ ಹಾಗೂ ಎಸಿ ಶಿವಾನಂದಮೂರ್ತಿ ಅವರುಗಳನ್ನ ತರಾಟೆಗೆ ತೆಗೆದುಕೊಂಡು ಜನರ ಸಮಸ್ಯೆ ಬಗೆಹರಿಸಿಲ್ಲವೆಂದು ಕಿಡಿಕಾರಿದರು.
ಕಂದಾಯ ಇಲಾಖೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಮನವಿ ಸಲ್ಲಿಸಿದ್ದರು. ಆದ್ರೆ, ಜನರ ಸಮಸ್ಯೆಗಳನ್ನ ಪರಿ ಹರಿಸದೆ ವಿಳಂಬ ಮಾಡಿದ್ದೀರಾ, ಕೆಲಸ ಮಾಡಿಕೊಡಲು ಲಂಚ ಪಡೆಯುತ್ತಿದ್ದೀರಾ ಎಂದು ಅಧಿಕಾರಿಗಳ ವಿರುದ್ಧ ಶಾಸಕರು ಹರಿಹಾಯ್ದುರು.