ಮಂಡ್ಯ:ನೀರಿನ ವಿಚಾರದಲ್ಲಿ ರಾಜಕೀಯ ಮಾಡುವ ದುಸ್ಥಿತಿಗೆ ನಾವು ತಲುಪಿಲ್ಲ ಎಂದು ನಾಗಮಂಗಲದ ಜೆಡಿಎಸ್ ಶಾಸಕ ಸುರೇಶ್ ಗೌಡ, ಮಾಜಿ ಸಚಿವ ಚಲುವರಾಯಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಸಚಿವ ಪುಟ್ಟರಾಜು ಅವರ ತಾಲೂಕಿಗೆ ನೀರು ಹರಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಚಲುವರಾಯಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರವನ್ನು ವಿರೋಧಿಸಿ ಶಾಸಕ ಸುರೇಶ್ ಗೌಡ, ಚಲುವರಾಯಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುರೇಶ್ ಗೌಡ , ಸದ್ಯಕ್ಕೆ ಬೆಳೆದಿರುವ ಬೆಳೆಗಳಿಗೆ ನೀರು ಕೊಡಬೇಕು ಅನ್ನೋದು ನಮ್ಮ ಉದ್ದೇಶವಾಗಿದೆ. ಈ ಸಮಸ್ಯೆಯನ್ನು ಹೇಗೆ ಪರಿಹರಿಸಬೇಕು ಎಂದು ಯೋಚನೆ ಮಾಡುತ್ತಿದ್ದೇವೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡುವ ಸ್ಥಿತಿಗೆ ನಾವು ತಲುಪಿಲ್ಲ ಎಂದರು.