ಬೆಂಗಳೂರು/ಮಂಡ್ಯ: ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು15 ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಶ್ರೀ ಕಾಮೇಗೌಡರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ವೆಂಕಟಗೌಡ ಮತ್ತು ರಾಜಮ್ಮ ದಂಪತಿಯ ಪುತ್ರ ಕಾಮೇಗೌಡರು ಶಾಲೆಯ ಮೆಟ್ಟಿಲು ಹತ್ತಿ ಅಕ್ಷರ ಕಲಿತವರಲ್ಲ. ತಾವಾಯ್ತು, ತಮ್ಮ ಪಾಡಾಯ್ತು ಎಂದು ಕೆಲಸ ಮಾಡಿಕೊಂಡಿದ್ದ ಅವರಿಗೆ ಕುರಿಗಳ ಮೇಲಿನ ಪ್ರೀತಿಯೇ ಪರಿಸರದ ಕಾಳಜಿ ಬೆಳೆಸಿತು.
ಇದನ್ನೂ ಓದಿ:ಕಾಮೇಗೌಡರ ಕೆರೆಗಳ ನಿರ್ಮಾಣದ ಕಥೆ -ವ್ಯಥೆ : ಇಲ್ಲಿದೆ ವಾಸ್ತವ ಚಿತ್ರಣ
ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಕಾಮೇಗೌಡರನ್ನು ಶ್ಲಾಘಿಸಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ.
ಇದನ್ನೂ ಓದಿ:'ಕೆರೆಗಳ ಮನುಷ್ಯ' ಕಾಮೇಗೌಡರಿಗೆ ಕೆಎಸ್ಆರ್‌ಟಿಸಿ ಗೌರವ: ಉಚಿತ ಬಸ್ ಪಾಸ್ ವಿತರಣೆ
ಸಿಎಂ ಸಂತಾಪ:ಆಧುನಿಕ ಭಗೀರಥ ಕಾಮೇಗೌಡರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.
ದೇವೇಗೌಡ, ಹೆಚ್ಡಿಡಿ ಕಂಬಿನಿ:ಕಮೇಗೌಡರ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಕಲ್ಮನೆ ಕಮೇಗೌಡ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟಾಯಿತು. ತಮ್ಮ ಸ್ವಂತ ಹಣದಲ್ಲಿ ಕೆರೆ ಕಟ್ಟೆಗಳನ್ನು ನಿರ್ಮಾಣ ಮಾಡಿ ಅಂತರ್ಜಲ ವೃದ್ಧಿಗೆ ಕಾರಣರಾದ ಇವರ ಕೊಡುಗೆ ಅತ್ಯಮೂಲ್ಯವಾದದ್ದು.
ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.