ಕರ್ನಾಟಕ

karnataka

ETV Bharat / state

ಶ್ರೀರಂಗಪಟ್ಟಣ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೊನಾ‌

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರೊ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಲ್ಲ 162 ಮಕ್ಕಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿಲಾಗಿದ್ದು, ಅವರಲ್ಲಿ 11 ವಿದ್ಯಾರ್ಥಿಗಳಿಗೆ ಕೋವಿಡ್​ ಸೋಂಕು ತಗುಲಿರುವುದು ದೃಢಪಟ್ಟಿದೆ.

Morarji Desai Residential School 11 students tested positive
11 ವಿದ್ಯಾರ್ಥಿಗಳಿಗೆ ಕೊರೊನಾ

By

Published : Apr 3, 2021, 11:56 AM IST

ಮಂಡ್ಯ:ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರೊ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಆತಂಕ ಮನೆ ಮಾಡಿದೆ.

ಕೋವಿಡ್ ಎರಡನೇ ಅಲೆ ಅದಾಗಲೇ ಶುರುವಾಗಿದ್ದು, ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, 8, 9 ನೇ ತರಗತಿಯ ತಲಾ ಐದು ಮಂದಿ, 10 ನೇ ತರಗತಿಯ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಪತ್ತೆಯಾಗಿದೆ.

ತಾಲೂಕು ಆಡಳಿತ ಮಂಡಳಿ ಈಗಾಗಲೇ ಶಾಲೆಯನ್ನು ಸೀಲ್​ಡೌನ್​ ಮಾಡಿದೆ. ಈ ಶಾಲೆಯಲ್ಲಿ 7 ರಿಂದ 10 ನೇ ತರಗತಿ ವರೆಗೆ 162 ಮಕ್ಕಳು ಇದ್ದು, ಎರಡು ದಿನಗಳ ಹಿಂದೆ ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 11 ಮಕ್ಕಳಿಗೆ ಸೋಂಕು ದೃಢವಾಗಿದೆ.

ಶಾಲೆಯ ಆಡಳಿತ ಮಂಡಳಿ ಹಾಗೂ ಪೋಷಕರಿಗೆ ಆತಂಕ ಶುರುವಾಗಿದ್ದು , ಶಾಲಾ ಮಕ್ಕಳಿಗೆ ರಜೆ ಘೋಷಣೆ ಬಗ್ಗೆ ನಿರ್ಧರಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ABOUT THE AUTHOR

...view details