ಮಂಡ್ಯ: ಕೊರೊನಾ ಸೋಂಕಿತರ ಹೆಚ್ಚಳ ಹಿನ್ನೆಲೆಯಲ್ಲಿ ಪಿ.ಹೊಸಹಳ್ಳಿ ಗ್ರಾಮವನ್ನು ಸೀಲ್‌ಡೌನ್ ಮಾಡಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.
ಪಿ.ಹೊಸಹಳ್ಳಿ ಗ್ರಾಮದಲ್ಲಿ 20 ಸೋಂಕಿತರು ಪತ್ತೆ: ಗ್ರಾಮ ಸೀಲ್‌ಡೌನ್ - ಪಿ.ಹೊಸಹಳ್ಳಿ ಗ್ರಾಮದಲ್ಲಿ 20 ಸೋಂಕಿತರು ಪತ್ತೆ
ಶ್ರೀರಂಗಪಟ್ಟಣ ತಾಲೂಕಿನ ಪಿ.ಹೊಸಹಳ್ಳಿ ಗ್ರಾಮದಲ್ಲಿ 20ಕ್ಕೂ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಗ್ರಾ.ಪಂ.ವತಿಯಿಂದ ಊರನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.
ಪಿ.ಹೊಸಹಳ್ಳಿ ಗ್ರಾಮದಲ್ಲಿ 20 ಸೋಂಕಿತರು ಪತ್ತೆ
ತಾಲೂಕು ಆಡಳಿತ ಮಂಡಳಿ ಗ್ರಾಮವನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿ ಸೀಲ್ ಡೌನ್ ಮಾಡಿದೆ. ಗ್ರಾಮಕ್ಕೆ ಹೊರಗಿನವರಿಗೆ ನಿರ್ಬಂಧ ಹೇರಲಾಗಿದೆ. ಗ್ರಾಮದ ಬೀದಿಬೀದಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಕೊರೊನಾ ನಿಯಂತ್ರಣದ ಜೊತೆಗೆ ಆರೋಗ್ಯ ಇಲಾಖೆಯಿಂದ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾರೆ.