ಮಂಡ್ಯ:ಕೌಟುಂಬಿಕ ಕಲಹಕ್ಕೆ ಬೇಸತ್ತು ಕಾವೇರಿ ನದಿಗೆ ಹಾರಿ ತಾಯಿ ಮಗು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಬಳಿಯ ಸಂಗಮದಲ್ಲಿ ನಡೆದಿದ್ದು, ತಾಯಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆ: ಮಗಳೊಂದಿಗೆ ತಾಯಿ ಆತ್ಮಹತ್ಯೆ ಯತ್ನ - ಕುಸುನಾ ಭಾನು
ಕೌಟುಂಬಿಕ ಕಲಹಕ್ಕೆ ಬೇಸತ್ತು ಕಾವೇರಿ ನದಿಗೆ ಹಾರಿ ತಾಯಿ ಮಗು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಬಳಿಯ ಸಂಗಮದಲ್ಲಿ ನಡೆದಿದ್ದು, ತಾಯಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಕೌಟುಂಬಿಕ ಕಲಹ ಹಿನ್ನಲೆ; ಮಗಳೊಂದಿಗೆ ತಾಯಿ ಆತ್ಮಹತ್ಯೆ ಯತ್ನ
ನೀರಿನ ರಭಸಕ್ಕೆ ಮಗು ಕೊಚ್ಚಿ ಹೋಗಿದ್ದು, ಮಹಿಳೆಯನ್ನು ರಕ್ಷಣೆ ಮಾಡಿದ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿ ಕುಸುನಾ ಭಾನು(31) ಮತ್ತು ಈಕೆಯ ಮಗಳು ಜಯಿಮಾ ಕೌಸರ್(11)ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಮಗಳು ಸಾವಿಗೀಡಾಗಿದ್ದಾಳೆ ಎಂದು ಶಂಕಿಸಲಾಗಿದ್ದು, ಶವಕ್ಕಾಗಿ ಶೋಧ ಮಾಡಲಾಗುತ್ತಿದೆ.
ಈ ಘಟನೆಯ ಕುರಿತು ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿದ್ದು, ಮಹಿಳೆಯಿಂದ ಮಾಹಿತಿ ಪಡೆಯುತ್ತಿದ್ದಾರೆ.