ಕರ್ನಾಟಕ

karnataka

ETV Bharat / state

ಕೌಟುಂಬಿಕ ಕಲಹ : ಮಂಡ್ಯದಲ್ಲಿ ಕಾವೇರಿ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ - ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ಮಗಳೊಂದಿಗೆ ತಾಯಿಯೊಬ್ಬಳು ಗೋಸಾಯ್​ ಘಾಟ್​ ಬಳಿ ಇರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

mother-committed-suicide-with-daughter-in-mandya
ತಾಯಿ ಮಗಳು ಆತ್ಮಹತ್ಯೆ

By

Published : Dec 18, 2021, 1:39 PM IST

ಮಂಡ್ಯ :ಕೌಟುಂಬಿಕ ಕಲಹ ಹಿನ್ನೆಲೆ ಮೂರು ವರ್ಷದ ಮಗಳೊಂದಿಗೆ ತಾಯಿಯೋರ್ವಳು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೋಸಾಯ್​ ಘಾಟ್​ ಬಳಿ ನಡೆದಿದೆ.

ತಾಯಿ ಮಗಳು ಆತ್ಮಹತ್ಯೆ

ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದ ನಿವಾಸಿಗಳಾದ ತಾಯಿ ಭಾರ್ಗವಿ (32), ಮಗಳು ದೀಕ್ಷಾ (03) ಮೃತರು. 5 ವರ್ಷಗಳ ಹಿಂದೆ ಶ್ರೀರಂಗಪಟ್ಟಣದ ದೇವೇಗೌಡನಕೊಪ್ಪಲು ಗ್ರಾಮದ ಪ್ರದೀಪ್​ ಕುಮಾರ್​ ಜೊತೆ ಭಾರ್ಗವಿ ಮದುವೆಯಾಗಿದ್ದರು. ಮೈಸೂರಿನ ಹೂಟಗಳ್ಳಿಯಲ್ಲಿ ವಾಸವಿದ್ದರು. ಗಂಡ-ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತು ಮಗಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆ

ಕಾವೇರಿ ನದಿಯಲ್ಲಿ ತಾಯಿ ಮಗುವಿನ ಶವ ತೇಲುತ್ತಿದ್ದದ್ದನ್ನು ಕಂಡ ಸ್ಥಳೀಯರು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details