ಮಂಡ್ಯ: ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿಚಾರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ನಡುವೆ ಕೆಲವು ದಿನಗಳ ಹಿಂದೆಯಷ್ಟೇ ದೊಡ್ಡ ಸಂಘರ್ಷಕ್ಕೆ ಕಾರಣವಾಗಿತ್ತು.
ಇದರ ಬೆನ್ನಲ್ಲೇ ಸಂಸದೆ ಸುಮಲತಾ ಅಂಬಿ ಕೆಆರ್ಎಸ್ ಅಣೆಕಟ್ಟು ಹಾಗೂ ಅಕ್ರಮ ಗಣಿಗಾರಿಕೆ ಜಾಗಕ್ಕೆ ಭೇಟಿ ನೀಡಿದ್ದರು. ಅಲ್ಲದೇ ಅಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಸುಮಲತಾ ಧ್ವನಿ ಎತ್ತಿದ್ದರು.
ಇದೀಗ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ದೆಹಲಿಯಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ದೆಹಲಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸಂಸದೆ ಸುಮಲತಾ ಅಂಬರೀಶ್ ಭೇಟಿ ಮಾಡಿ, ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡಿದ್ದಾರೆ.